Mandya,Pandavapura,ಮಂಡ್ಯ,ಪಾಂಡವಪುರ,ಬೆಂಗಳೂರು,Bengaluru, ಮೇ 7 -- ಮಂಡ್ಯ: ಭ್ರೂಣ ಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, ಮಂಡ್ಯ ತಾಲೂಕು ಹಾಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣದ ಬಳಿಕ ಈಗ ಪಾಂಡವಪುರದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಪಾಂಡವಪುರ ತಾಲೂಕು ಆರೋಗ್ಯ ಇಲಾಖೆ ವಸತಿ ಗೃಹ ಬಳಕೆಯಾಗಿದೆ. ಈ ಸಂಬಂಧ ಪೊಲೀಸರು ಆಂಬುಲೆನ್ಸ್ ಚಾಲಕ ಸೇರಿ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಆಂಬುಲೆನ್ ಚಾಲಕ ಆನಂದ್ (37), ಹೊರಗುತ್ತಿಗೆ ಡಿ-ಗ್ರೂಪ್ ಸಿಬ್ಬಂದಿ ಅಶ್ವಿನಿ (32), ಆಕೆಯ ತಾಯಿ ಸತ್ಯಮ್ಮ (54), ಪಾಂಡವಪುರದ ಖಾಸಗಿ ನರ್ಸಿಂಗ್ ಹೋಮ್‌ನ ಡಿ-ಗ್ರೂಪ್ ಸಿಬ್ಬಂದಿ ಗಿರಿಜಮ್ಮ (48) ಎಂದು ಗುರುತಿಸಲಾಗಿದೆ. ಈ ಪೈಕಿ ಅಶ್ವಿನಿ ಎಂಬಾಕೆ ಆನಂದ್‌ನ ಪತ್ನಿ. ಅಶ್ವಿನಿಯ ತಾಯಿ ಸತ್ಯಮ್ಮ. ಪ್ರಸವ ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದ ಗಿರಿಜಮ್ಮ ಇವರೊಂದಿಗೆ ಕೈ ಜೋಡಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಂಡವಪುರ ತಾಲೂಕು ಆರೋಗ್ಯ ಇಲಾಖೆ ವಸತಿ ಗೃಹವನ್ನು ...