Bangalore, ಮೇ 6 -- ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಇಂದು (ಮೇ 7) ಶುರುವಾಗಿದೆ. ಬಿರುಬಿಸಲಿನ ನಡುವೆಯೂ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ಬೆಳಿಗ್ಗೆ7ರಿಂದ ಸಂಜೆ 6 ರವರಗೆ ನಡೆಯಲಿದೆ. ಈ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ದ ನಾಲ್ವರು ಹಿರಿಯ ಸಚಿವರ ಮಕ್ಕಳೂ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಈ ಕಾರಣದಿಂದ ಲೋಕಸಭೆ ಚುನಾವಣೆಯು ಅವರ ರಾಜಕೀಯ ಭವಿಷ್ಯವನ್ನೂ ನಿರ್ಧಾರ ಮಾಡಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎರಡನೇ ಹಂತದ ಮತದಾನ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.

ಉತ್ತರ ಕರ್ನಾಟಕದಲ್ಲಿ ಕಲ್ಯಾಣ ಕರ್ನಾಟಕದ ಬೀದರ್‌, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಕಿತ್ತೂರು ಕರ್ನಾಟಕದ ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ. ಬೆಳಗಾವಿ, ಹಾವೇರಿ, ಧಾರವಾಡ, ಕರಾವಳಿ ಭಾಗದ ಉತ್ತರ ಕನ್ನಡ, ಮಧ್ಯ ಕರ್ನಾಟಕದ ದಾವಣಗೆರೆ, ಮಲೆನಾಡಿನ ಶಿವಮೊ...