Bengaluru, ಏಪ್ರಿಲ್ 25 -- ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-ರ ಪರೀಕ್ಷೆಗಳು ಏಪ್ರಿಲ್‌ 29 ರಿಂದ ಆರಂಭಗೊಳ್ಳಲಿದ್ದು, ಈಗಾಗಲೇ ಪ್ರವೇಶ ಪತ್ರಗಳನ್ನು ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ನೀಡಲಾಗಿದೆ. ಆದರೆ ಪ್ರವೇಶ ಪತ್ರ ಪಡೆದ ಹಲವಾರು ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ತೆಗೆದುಕೊಂಡಿರುವ ವಿಷಯ ಬಿಟ್ಟು ಹೆಚ್ಚುವರಿ ವಿಷಯಗಳನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದೆ. ಇದರಿಂದ ಗಲಿಬಿಲಿಗೆ ಒಳಗಾದ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರವೇಶ ಪತ್ರ ಸರಿಪಡಿಸಿಕೊಡುವಂತೆ ಮನವಿ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ನೀಡಿರುವ ಅಧಿಕಾರಿಗಳು, ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಕಿವಿಮಾತು ಹೇಳಿದ್ದಾರೆ.

ಈ ತಿಂಗಳು ಪ್ರಕಟಿಸಲಾದ ಫಲಿತಾಂಶದ ನಂತರ ಅನುತ್ತೀರ್ಣರಾದ, ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸಲಾಗುತ್ತಿದೆ.ಇದರೊಟ್ಟಿಗೆ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳೂ ಪರೀಕ್ಷೆಗೆ ಹಾಜರಾಗಲು ವ್ಯವಸ...