ಭಾರತ, ಮೇ 3 -- ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ರಾಜ್ಯ ಬಿಜೆಪಿ ಮುಖಂಡ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಬಂಧನದ ಭೀತಿಯಿಂದ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಭಾರತ ಬಿಟ್ಟು ವಿದೇಶಕ್ಕೆ ಹಾರಲು ಸಂಸದ ಬಳಸಿದ್ದು ರಾಜತಾಂತ್ರಿಕ ಪಾಸ್‌ಪೋರ್ಟ್‌, ಅಂದರೆ Diplomatic passport. ಇತ್ತ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಹೀಗಾಗಿ ಕಾನೂನು ರೀತಿಯಲ್ಲಿ ತನಿಖೆ ಎದುರಿಸಲು ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಪಲಾಯನ ಮಾಡಲು ರೇವಣ್ಣ ಬಳಸಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಸಿಎಂ ಒತ್ತಾಯಿಸಿದ್ದಾರೆ. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ...