ಭಾರತ, ಮೇ 3 -- ಮೈಸೂರು: ಹಾಸನ ಲೈಂಗಿಕ ಹಗರಣ ಕೇಸ್ ಜೊತೆಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ಮಹಿಳೆಯ ಪುತ್ರ ಮೈಸೂರು ಜಿಲ್ಲೆ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ (ಮೇ 2) ತಡರಾತ್ರಿ ದೂರು ದಾಖಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸೂಕ್ಷ್ಮ ಪ್ರಕರಣವಾಗಿರುವ ಕಾರಣ ಮಾಹಿತಿ ಬಹಿರಂಗಪಡಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಹಲವರ ಬಳಿ ಮಾಹಿತಿ ಕಲೆ ಹಾಕಿರುವ ವಿಶೇಷ ತಂಡದ ಪೊಲೀಸರು, ಕೆ ಆರ್ ನಗರ ತಾಲೂಕಿನ ವಿವಿಧೆಡೆ ಹಲವರ ಬಳಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಕೆ ಆರ್ ನಗರ ಪಟ್ಟಣ ಪೊಲೀಸ್ ಠಾಣೆಗೆ ಸಂತ್ರಸ್ತೆಯ ಪುತ್ರ ನೀಡಿರುವ ದೂರಿನ ಪ್ರಕಾರ, ಸಂಸದ ಪ್ರಜ್ವಲ್ ರೇವಣ್ಣ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಆಯುಕ್ತೆ ನಂದಿ...