ಭಾರತ, ಮೇ 2 -- ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ ಮಿಮಿಕ್ರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲ (Shyam Rangeela) ಇದೀಗ ಪ್ರಧಾನಿ ಮೋದಿ ಅವರ ವಿರುದ್ಧ ಚುನಾವಣಾ ಕಣಕ್ಕಿಳಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ (Vranasi Lok Sabha Election 2024) ಶ್ಯಾಮ್ ರಂಗೀಲ ಸ್ಪರ್ಧಿಸಿದ್ದಾರೆ.

2017 ರಲ್ಲಿ ಮಿಮಿಕ್ರಿ ವಿಡಿಯೊಗಳು ವೈರಲ್ ಆದ ಬಳಿಕ ಈತ ಮುಖ್ಯ ವೇದಿಕೆಗೆ ಬಂದ. ಇದೀಗ 7 ವರ್ಷಗಳ ನಂತರ ವಾರಣಾಸಿಯಿಂದ ನರೇಂದ್ರ ಮೋದಿ ವಿರುದ್ಧ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ಅವರ ವಿರುದ್ಧ ಯಾಕೆ ಸ್ಪರ್ಧಿಸಿರುವುದು ಎಂಬುದರ ಬಗ್ಗೆ ಶ್ಯಾಮ್ ವಿಡಿಯೊ ಮೂಲಕ ಮಾಹಿತಿಯನ್ನು ವಿವರವಾಗಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಹಾಸ್ಯ ಕಲಾವಿದ ಶ್ಯಾಮ್ ರಂಗೀಲ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಇದೇ ಮೊದಲಲ್ಲ. ಈತ 2022 ರಾಜಸ್ಥಾನದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ...