Udupi, ಫೆಬ್ರವರಿ 13 -- ಉಡುಪಿ: ಕರ್ನಾಟಕ ಕರಾವಳಿ ಹಾಗೂ ಪಶ್ಚಿಮ ಘಟ್ಟದಲ್ಲಿ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಚುರುಕಾಗಿದೆಯೇ? ಕೆಲ ದಿನಗಳ ಹಿಂದೆ ನಡೆದ ಘಟನಾವಳಿಗಳನ್ನು ಗಮನಿಸಿದಾಗ ಈ ಅನುಮಾನ ಸಾರ್ವಜನಿಕರಲ್ಲಿ ದಟ್ಟವಾಗಿ ಕಾಡುತ್ತಿದೆ. ಈಗಾಗಲೇ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಈ ಕುರಿತು ತೀವ್ರ ನಿಗಾ ವಹಿಲಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ ಎನ್ನಲಾಗಿದೆ. ನಕ್ಸಲರ ಓಡಾಟದ ಹಿನ್ನಲೆ ಎ.ಎನ್.ಎಫ್. ನಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಮಲೆನಾಡು-ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ.

ಇದನ್ನೂ ಓದಿರಿ: Court News: ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವುದು ಅಸಾಂವಿಧಾನಿಕ ಅಲ್ಲ; ಸುಪ್ರೀಂ ಕೋರ್ಟ್ ಅಭಿಮತ

ಪಶ್ಚಿಮ ಘಟ್ಟದ ತಪ್ಪಲಿನ ಉದಯನಗರದ ಮನೆಯೊಂದರ ಮುಂಭಾಗ ನಕ್ಸಲರು ಕಾಣಿಸಿಕೊಂಡಿರುವ ವಿಚಾರವೀಗ ಬೆಳಕಿಗೆ ಬಂದಿದೆ. ದಟ್ಟ ಹಸಿರು ಅಥವಾ ಕಪ್ಪು ಬಣ್ಣದ ಬಟ್ಟೆ ಧರಿಸಿದ್ದು,...