ಭಾರತ, ಮೇ 2 -- ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ವೇಷ ಕಳಚಿ, ಬಣ್ಣ ತೆಗೆಯುವಾಗಲೇ ಹೃದಯಾಘಾತದಿಂದ ಚೌಕಿಯಲ್ಲಿ (ಯಕ್ಷಗಾನದ ಗ್ರೀನ್ ರೂಮ್) ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ, ರಾತ್ರಿ ಸುಮಾರು 12.25ಕ್ಕೆ ಚೌಕಿಯಲ್ಲಿ ಮಂಗಳ ಆಗುವ ವೇಳೆಗೇ ತೀವ್ರ ಹೃದಯಾಘಾತದಿಂದ ನಿಧನರಾದರು‌.

ಪುತ್ತೂರು ಗಂಗಾಧರ ಜೋಗಿಯವರು ಶ್ರೀ ಧರ್ಮಸ್ಥಳ ಮೇಳದ ಸವ್ಯಸಾಚಿ ಕಲಾವಿದ ಕಲಾವಿದ. ತನಗೆ ನೀಡಿದ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಸ್ತ್ರೀವೇಷ, ಪುಂಡುವೇಷ, ಕಿರೀಟ ವೇಷ, ಹಾಸ್ಯ, ಅನಿವಾರ್ಯವಾದರೆ ಕೇಶಾವರೀ ಬಣ್ಣದ ವೇಷಕ್ಕೂ ಅವರು ತಯಾರಾಗು...